

ನವದೆಹಲಿ: ಸಿಲಿಂಡರ್ ಸ್ಫೋಟಗೊಂಡು ಮೂರಂತಸ್ತಿನ ಕಟ್ಟಡ ಕುಸಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬುಧವಾರ ದೆಹಲಿಯ ಮೋತಿನಗರದ ಸುದರ್ಶನ್ ಪಾರ್ಕ್ ಬಳಿ ನಡೆದಿದೆ.
ಇಂದು ಬೆಳಿಗ್ಗೆ 7.45 ಸುಮಾರಿನಲ್ಲಿ ಎಲ್ ಪಿಜಿ ಗ್ಯಾಸ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಶೇಷಗಳಡಿ ಇನ್ನೂ ಹಲವರು ಸಿಕ್ಕಿಬಿದ್ದಿದ್ದಾರೆಂದು ಶಂಕಿಸಲಾಗಿದೆ. 7 ಅಗ್ನಿಶಾಮಕವಾಹನಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.