
ಪಣಜಿ: ಅಪರಾಧಿಯೊಬ್ಬನ ಪತ್ತೆಗಾಗಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರ ದೆಹಲಿ ನಿವಾಸ ಶೋಧಕ್ಕಾಗಿ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ನೀಡಿದ್ದ ಸರ್ಚ್‌ವಾರೆಂಟ್ ಆದೇಶಕ್ಕೆ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
2006ರಲ್ಲಿ ನಡೆದ ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾಗಿದ್ದ ಗೋವಾದ ಮಾಜಿ ಸಚಿವ ಫ್ರಾನ್ಸಿಸ್ಕೋಮಿಕ್ಕಿ ಪಚೇಕೋ ಅವರು ದೆಹಲಿಯಲ್ಲಿರುವ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ 10 ಅಕಬರ್ ರಸ್ತೆಯ ಪಾರಿಕ್ಕರ್ ಅವರ ಮನೆಯ ಶೋಧಕ್ಕೆ ಸರ್ಚ್ ವಾರೆಂಟ್ ಆದೇಶ ಹೊರಡಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಗೋವಾ ಸರ್ಕಾರ ರಕ್ಷಣಾ ಸಚಿವರ ಮನೆ ಶೋಧನೆ ಮಾಡಬಾರದು, ಇದು ರಕ್ಷಣಾ ಇಲಾಖೆಯ ಆಸ್ತಿ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಇದರ ಅನ್ವಯ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
Advertisement