ಲೋಕಸಭೆ
ಲೋಕಸಭೆ

ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ ರೈತನ ಆತ್ಮಹತ್ಯೆ

ಭೂಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್-ಮಂತರ್ ನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು...
Published on

ನವದೆಹಲಿ: ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಬುಧವಾರ ಜಂತರ್-ಮಂತರ್ ನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಪ್ರಶ್ನೋತ್ತರ ಅವಧಿ ರದ್ದುಪಡಿಸಿ ರೈತನ ಆತ್ಮಹತ್ಯೆ ಘಟನೆ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸಂಸದರು ಪಟ್ಟುಹಿಡಿದರು. ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಿದ ಇತರೆ ಪಕ್ಷದ ಸಂಸದರೂ ಚರ್ಚಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು, ಘಟನೆ ಕುರಿತಂತೆ ಚರ್ಚೆ ನಡೆಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು. ನಂತರ ಸ್ಪೀಕರ್ ಸುಮಿತ್ರ ಮಹಾಜನ್ ಅವರು ಪ್ರಕರಣ ಕುರಿತಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೇಳಿಕೆ ನೀಡುತ್ತಾರೆ ಎಂದರು.

ಆದರೆ ಸರ್ಕಾರದ ನಡೆಯಿಂದ ತೃಪ್ತರಾಗದ ಪ್ರತಿಪಕ್ಷದ ಸಂಸದರು ಇದ್ದಕ್ಕಿದ್ದಂತೆ ಪ್ರತಿಭಟನೆಗಿಳಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಂತೆ ಸದನದಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಭಾಧ್ಯಕ್ಷರು ಕಲಾಪವನ್ನು 30 ನಿಮಿಷಗಳವರೆಗೆ  ಮುಂದೂಡಿದರು.

ಇನ್ನು ರಾಜ್ಯಸಭೆಯಲ್ಲೂ ರೈತನ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಸಿಬಿಸಿ ಚರ್ಚೆ ನಡೆಯಿತು.

ರಾಜಸ್ತಾನ ಮೂಲದ 41 ವರ್ಷದ ಗಜೇಂದ್ರ ಸಿಂಗ್ ಎಂಬುವವರು ಭೂಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಮ್ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮತ್ತಿತರ ನಾಯಕರ ಎದುರೇ ಆತ್ಮಹತ್ಯೆಗೆ ಶರಣಾಗಿದ್ದ. ಈ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com