ಎಚ್ ಎಲ್ ದತ್ತು
ಎಚ್ ಎಲ್ ದತ್ತು

ಎನ್ ಜೆ ಎ ಸಿ ನೇಮಕಾತಿ ತ್ರಿಸದಸ್ಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲ್ಲ- ಎಚ್. ಎಲ್ ದತ್ತು

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ತ್ರಿಸದಸ್ಯ ಸಮಿತಿ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ನವದೆಹಲಿ: ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ರಚನೆ ಸಂಬಂಧ ರಚಿಸಿರುವ ತ್ರಿಸದಸ್ಯ ಸಮಿತಿಯ ಸಭೆಯಲ್ಲಿ ಪಾಲ್ಗೋಳ್ಳಲು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್ ದತ್ತು  ನಿರಾಕರಿಸಿದ್ದಾರೆ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ರಚನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹಾಗೂ ವಿರೋಧ ಪಕ್ಷದ ನಾಯಕರನ್ನೊಳಗೊಂಡ ತ್ರಿಸದಸ್ಯ ಸಮಿತಿ ಸಭೆಯಲ್ಲಿ ಪಾಲ್ಗೋಳ್ಳದಿರಲು ನಿಧಾರ ಕೈಗೊಂಡಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ನ್ಯಾಯಮೂರ್ತಿ ಎಚ್.ಎಲ್ ದತ್ತು ಪತ್ರ ಬರೆದಿರುವುದಾಗಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ತಿಳಿಸಿದ್ದಾರೆ.

ತ್ರಿ ಸದಸ್ಯ ಸಮಿತಿಯು ಎನ್ ಜೆ ಎ ಸಿ ಗೆ  ಆರು ಮಂದಿ ಪ್ರಸಿದ್ಧ ನ್ಯಾಯಮೂರ್ತಿಗಳನ್ನು ನೇಮಕ ಮಾಡಿತ್ತು. ಆದರೆ ನ್ಯಾಯಾಧೀಶರ ನೇಮಕ ಸಂಬಂಧ ಹೊಸ ಕಾನೂನಿನ ವಿಚಾರವಾಗಿ, ನ್ಯಾಯಾಲಯದಲ್ಲಿ ಐದು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ಇಂದು ವಿಚಾರಣೆ ನಡೆಸುತ್ತಿದೆ. ಹೀಗಾಗಿ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಎನ್ ಜೆ ಎ ಸಿ ಸಮಿತಿ ಸಭೆಗಳಲ್ಲಿ ಭಾಗವಹಿಸಲ್ಲ ಎಂದು  ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ತಿಳಿಸಿದ್ದಾರೆ.


Related Stories

No stories found.

Advertisement

X
Kannada Prabha
www.kannadaprabha.com