

ನವದೆಹಲಿ: ಲಷ್ಕರ್-ಇ-ತೋಯಿಬಾ(ಎಲ್‌ಇಟಿ) ಹಾಗೂ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಂಗಳವಾರ ಎಚ್ಚರಿಸಿದೆ.
ಮಾನವ ರಹಿತ ಡ್ರೋನ್ ಗಳನ್ನು ಬಳಸಿ ಉಗ್ರರು ವಾಯು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಪೊಲೀಸರಿಗೆ ಮಾಹಿತಿ ನೀಡಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಭದ್ರತೆ ಕುರಿತು ಚರ್ಚಿಸಲು ದಹೆಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರು ಎಸಿಪಿಗಳ ಸಭೆ ಕರೆದಿದ್ದಾರೆ. ಅಲ್ಲದೆ ಡ್ರೋನ್‌ಗಳ ಮಾರಾಟ ಮತ್ತು ಖರೀದಿ ಮಾಡಿದವರ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ.
ಮುಂಬಯಿ ದಾಳಿಯ ರೂವಾರಿ ಉಗ್ರ ಝಕಿ ಉರ್ ರೆಹಮಾನ್ ಲಖ್ವಿ ಪಾಕಿಸ್ಥಾನ ಜೈಲಿನಿಂದ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಇನ್ನೊಮ್ಮೆ ಭಾರೀ ದಾಳಿಗೆ ಸಂಚು ರೂಪಿಸುವ ಸಾಧ್ಯತೆಯಿರುವುದರಿಂದ ಭದ್ರತಾ ಪಡೆಗಳು ಹೈಅಲರ್ಟ್ ಘೋಷಿಸಿವೆ.