ಪಂಜಾಬ್‌ಗೆ ಭೇಟಿ ನೀಡಿ, ರೈತರ ಪರಿಸ್ಥಿತಿನೂ ನೋಡಿ: ಪ್ರಧಾನಿಗೆ ರಾಹುಲ್

ರೈತರ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ರೈತರ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರೈತರಿಗಾಗಿ ಕೇಂದ್ರ ಸರ್ಕಾರ ಏನನ್ನೂ ಮಾಡುತ್ತಿಲ್ಲ ಆರೋಪಿಸಿದ ರಾಹುಲ್ ಗಾಂಧಿ, ಮೋದಿ ಅವರು ವಿದೇಶಕ್ಕೆ ಭೇಟಿ ನೀಡುವ ಹಾಗೆ ಪಂಜಾಬ್‌ಗೆ ಭೇಟಿ ನೀಡಿ, ಅಲ್ಲಿನ ರೈತರ ಪರಿಸ್ಥಿತಿಯನ್ ನೋಡಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾದ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಈ ದೇಶದ ರೈತರು ಮೇಕ್ ಇನ್ ಇಂಡಿಯಾದ ಭಾಗವಲ್ಲವೇ? ರೈತರು ಬೆಳೆಯುತ್ತಿರುವ ಬೆಳೆಗಳು ಮೇಕ್ ಇನ್ ಇಂಡಿಯಾ ಮಾಡುತ್ತಿಲ್ಲವೇ ಎಂದು ರಾಹುಲ್ ಪ್ರಶ್ಮಿಸಿದರು.

ಇದೇ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಕ್ರಿಮಿನಲ್‌ಗಳು ಮತ್ತು ಹೇಡಿಗಳು ಎಂಬ ಹರಿಯಾಣ ಕೃಷಿ ಸಚಿವ ಓಂ ಪ್ರಕಾಶ್ ಧಂಕರ್ ಅವರ ಹೇಳಿಕೆಯನ್ನು ರಾಹುಲ್ ಗಾಂಧಿ ಖಂಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com