ಭೂಕಂಪ: ಮೋದಿಗೆ ಕರೆ ಮಾಡಿದ ಪಾಕ್ ಪ್ರಧಾನಿ, ಭಾರತದ ರಕ್ಷಣಾ ಕಾರ್ಯಕ್ಕೆ ಪ್ರಶಂಸೆ

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಕಳೆದ ಶನಿವಾರ ನೇಪಾಳದಲ್ಲಿ ಸಂಭವಿಸಿದ...
ಪಾಕ್ ಪ್ರಧಾನಿ ನವಾಜ್ ಷರೀಫ್
ಪಾಕ್ ಪ್ರಧಾನಿ ನವಾಜ್ ಷರೀಫ್

ನವದೆಹಲಿ: ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಕಳೆದ ಶನಿವಾರ ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮ ಭಾರತದ ವಿವಿಧ ಪ್ರದೇಶಗಳಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

'ಪ್ರಧಾನಿ ನವಾಜ್ ಷರೀಫ್ ಅವರು ನನದೆ ದೂರವಾಣಿ ಕರೆ ಮಾಡಿದ್ದರು. ಭೂಕಂಪದಿಂದ ಭಾರತದ ವಿವಧ ಪ್ರದೇಶಗಳಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ದೂರವಾಣಿ ಸಂಭಾಷಣೆ ವೇಳೆ ಪಾಕ್ ಪ್ರಧಾನಿ ಭೂಕಂಪ ಪೀಡಿತ ನೇಪಾಳದಲ್ಲಿ ಭಾರತ ನಡೆಸುತ್ತಿರುವ ರಕ್ಷಣಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಸಾರ್ಕ್ ರಾಷ್ಟ್ರಗಳು ವಿಪತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಜಂಟಿಯಾಗಿ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಷರೀಫ್ ಅವರಿಗೆ ಸಲಹೆ ನೀಡಿದ್ದಾರೆ. ಮೋದಿಯ ಈ ಸಲಹೆ ಬಗ್ಗೆಯೂ ಪಾಕ್ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com