ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್

ಚಲಿಸುತ್ತಿದ್ದ ಕಾರಿನಲ್ಲಿ 22 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಶುಕ್ರವಾರ ವರದಿಯಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೀರತ್: ಚಲಿಸುತ್ತಿದ್ದ ಕಾರಿನಲ್ಲಿ 22 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಬಿಜ್ನಾರ್ ಜಿಲ್ಲೆಯ ನಾಗಿನ ಗ್ರಾಮದ ಯುವತಿಯ ಮೇಲೆ ಪರಿಚಯಸ್ಥನೊಬ್ಬ ಹಾಗೂ ಆತನ ಇಬ್ಬರು ಸ್ನೇಹಿತರು ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯನ್ನು ಅಜ್ರಾದ ಹಳ್ಳಿ ಬಳಿಯಿರುವ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದಾರೆ.

ಪ್ರಜ್ಞೆ ಕಳೆದುಕೊಂಡಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಮಾಂಸ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಾಸಿಮ್ ಎಂಬುವವನು ಅದೆ ಫ್ಯಾಕ್ಟರಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವತಿಯನ್ನು ಕರೆಸಿಕೊಂಡಿದ್ದಾನೆ. ನಂತರ ಅವನ ಇಬ್ಬರು ಸ್ನೇಹಿತರಿದ್ದ ಕಾರಿನಲ್ಲಿ ಆಕೆಯನ್ನು ಮೀರತ್ ಗೆ ಕರೆದುಕೊಂಡು ಹೋಗಿದ್ದಾನೆ.

ಕುಡಿಯಲು ಜ್ಯೂಸ್ ನೀಡಿದ್ದಾರೆ. ಜ್ಯೂಸ್ ನೀಡಿದ ನಂತರ ಯುವತಿ ಪ್ರಜ್ಞೆ ಕಳೆದುಕೊಂಡಿದ್ದಾಳೆ. ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯನ್ನು ಕಾಡಿನಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com