

ಜಮ್ಮು: ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮುವಿನ ಆರ್.ಎಸ್ ಪುರಾ ಸೆಕ್ಟರ್ ಬಳಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಡ ರಾತ್ರಿ 1.30ರ ಸಮಯದಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ.
ಕಳೆದ ಏಳು ದಿನಗಳಲ್ಲಿ ಪಾಕ್ ಸೈನಿಕರು 12ಕ್ಕಿಂತ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.