ಗೋವಾ ಕಾಂಗ್ರೆಸ್ ಅಧಿಕಾರಾವಧಿಯ ಹಗರಣ ಬಯಲಿಗೆಳೆಯಲು ಸಂಪೂರ್ಣ ಸಹಕಾರ: ಮನೋಹರ್ ಪರಿಕ್ಕರ್

ಗೋವಾದಲ್ಲಿ ಈ ಹಿಂದಿದ್ದ ಕಾಂಗ್ರೆಸ್ ಸರಕಾದ ಹಗರಣಗಳನ್ನು ಬಯಲಿಗೆಳೆಯಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್
ಮನೋಹರ್ ಪರಿಕ್ಕರ್

ಪಣಜಿ: ಗೋವಾದಲ್ಲಿ ಈ ಹಿಂದಿದ್ದ ಕಾಂಗ್ರೆಸ್ ಸರಕಾದ ಹಗರಣಗಳನ್ನು ಬಯಲಿಗೆಳೆಯಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೋವಾ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಪಣಜಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮನೋಹರ್ ಪರಿಕ್ಕರ್, ಅಮೆರಿಕದ ನ್ಯೂಜೆರ್ಸಿ ಮೂಲದ ನಿರ್ಮಾಣ ಸಂಸ್ಥೆ ‘ಲೂಯಿಸ್ ಬರ್ಗರ್’ ನಿಂದ ಒಂದು ಕೋಟಿ ರೂಪಾಯಿ ಲಂಚ ಸ್ವೀಕರಿಸಿರುವ ಆರೋಪ ಎದುರಿಸುತ್ತಿರುವ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಖಾಮತ್ ಅವರನ್ನು ಗುರಿಯಾಗಿರಿಸಿಕೊಂಡು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮಾತನಾಡಿದ್ದಾರೆ.   

ಲೂಯಿಸ್ ಬರ್ಗರ್ ಹಗರಣ ಕಾಂಗ್ರೆಸ್ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಬಯಲು ಮಾಡಲಿದೆ. ಹಗರಣಗಳ ಬಗ್ಗೆ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ, ಸಿಬಿಐ ಸೇರಿದಂತೆ ಯಾವುದೇ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ  ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಗೋವಾ ಮತ್ತು ಅಸ್ಸಾಂನ ಎರಡು ಬೃಹತ್ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಗುತ್ತಿಗೆ ನೀಡಲು  ‘ಲೂಯಿಸ್ ಬರ್ಗರ್’ ಸಂಸ್ಥೆಯಿಂದ ಅಂದಿನ ಮುಖ್ಯಮಂತ್ರಿಯಾಗಿದ್ದ ದಿಗಂಬರ್ 1 ಕೋಟಿ ಲಂಚ ಪಡೆದಿದ್ದಾರೆ ಎಂದು ಹೇಳಲಾಗಿದೆ. ಈ ಲಂಚ ವ್ಯವಹಾರ 2010-2011 ನಡುವೆ ನಡೆದಿದ್ದು, ಲೂಯಿಸ್ ಬರ್ಗರ್ ಅಧಿಕಾರಿಗಳು ರು.1 ಕೋಟಿಗೂ ಹೆಚ್ಚು ಹಣವನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಗೋವಾ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com