

ನವದೆಹಲಿ: ಪ್ರತಿಪಕ್ಷಗಳು ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿವೆ ಎಂದು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿರುವ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ಸೋಮವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆಯೂ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ ಸುಷ್ಮಾ ಸ್ವರಾಜ್, ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ ಮತ್ತು ಲಲಿತ್ ಮೋದಿಗೆ ಯಾವುದೇ ಸಹಾಯ ಮಾಡಿಲ್ಲ. ನನ್ನ ವಿರುದ್ಧದ ಆರೋಪಗಳೆಲ್ಲ ಆಧಾರ ರಹಿತ ಎಂದರು.
ಲಲಿತ್ ಮೋದಿ ಪ್ರಯಾಣ ದಾಖಲೆಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ಯಾವತ್ತೂ ಲಂಡನ್‌ನ ವಲಸೆ ಅಧಿಕಾರಿಗಳೊಂದಿಗೆ ಮಾತನಾಡಿದ್ದ ಎಂದು ಸುಷ್ಮಾ ಸ್ಪಷ್ಟಪಡಿಸಿದರು.
ಈ ಸಂಬಂಧ ನಾನು ಚರ್ಚೆಗೆ ಸಿದ್ಧ. ಇದಕ್ಕಾಗಿ ನಾನು ಪ್ರತಿದಿನ ರಾಜ್ಯಸಭೆಯಲ್ಲಿ ಹಾಜರಾಗಿದ್ದೇನೆ. ಆದರೆ ಚರ್ಚೆಗೆ ನೀವೇ ಅವಕಾಶ ನೀಡುತ್ತಿಲ್ಲ ಎಂದರು.