ಜಮ್ಮುವಿನಲ್ಲಿ ಘರ್ಷಣೆ: ಮತ್ತೆ ನಾಲ್ಕು ದಿನ ಬಂದ್

ಜಮ್ಮುವಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳು ವಿಕೋಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು...
ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
Updated on: 

ಜಮ್ಮು: ಜಮ್ಮುವಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳು ವಿಕೋಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು ನಡುವೆ ಘರ್ಷಣೆ ಸಂಭವಿಸಿದೆ.

ರಾಜ್ಯದಲ್ಲಿ ಬಂದ್ ಇದ್ದರು ಪ್ರತಿಭಟನಾಕಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಲಾಠಿ ಜಾರ್ಜ್ ನಡೆಸಿದರು. ಇದರಿಂದ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ.

ಎಸಿಸಿ ಸೌಮ್ಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ಚದುರಿಸಲು ಮುಂದಾದರು ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದಾಗಿ ಪ್ರತಿಭಟನೆಯಲ್ಲಿ ತೊಡಗಿದ್ದ ವಕೀಲರು ಮತ್ತು ಟ್ರಾನ್ಸ್ ಪೊಟರ್ಸ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜೋರ್ವರ್ ಸಿಂಗ್ ಹೇಳಿದ್ದಾರೆ.

ಜಮ್ಮುವಿನಲ್ಲಿ ಏಮ್ಸ್ ಸ್ಥಾಪಿಸುವ ಭರವಸೆ ನೀಡಿದ್ದ ಬಿಜೆಪಿ, ಏಮ್ಸ್ ಬೇಡಿಕೆಯನ್ನು ಈಡೇರಿಸಿದೇ ರಾಜ್ಯದ ಜನತೆಗೆ ವಂಚಿಸಿದೆ ಎಂದು ಅಖಿಲ ಭಾರತ ವೈದ್ಯಕೀಯ ಸಂಸ್ಥೆ(ಏಮ್ಸ್) ಪ್ರತಿಭಟನೆ ನಡೆಸಿದ್ದು, ಕಳೆದ ಜುಲೈ 31 ರಿಂದ ಆಗಸ್ಟ್ 2ರವರೆಗೂ ಬಂದ್ ಗೆ ಕರೆ ನೀಡಿದ್ದವು. ನಿನ್ನೆ ಸಂಜೆಗೆ ಬಂದ್ ಗೆ ತೆರೆ ಬಿದ್ದದ್ದರಿಂದ ಪ್ರತಿಭಟನಾಕಾರರು ಮತ್ತೆ 72 ದಿನಗಳ ಕಾಲ ಬಂದ್ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com