

ಕೋಲ್ಕತಾ: ಪಶ್ಚಿಮ ಬಂಗಾಳದ ಬಾರಾನಗರದಲ್ಲಿರುವ ಫೈಬರ್ ಗ್ಲಾಸ್ ಫ್ಯಾಕ್ಟರಿಯಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಭಾರೀ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದು, ದಟ್ಟ ಹೊಗೆ ಆವರಿಸಿದೆ.
ಸ್ಥಳಕ್ಕೆ 10 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ದೌಡಾಯಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿ ಅವಘಡ ಸಂಭವಿಸಿರುವ ಫ್ಯಾಕ್ಟರಿಯ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಯಿರುವುದರಿಂದ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಬೆಂಕಿ ದುರಂತದಲ್ಲಿ ಈ ವರೆಗೂ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...