

ಜಮ್ಮು: ಜಮ್ಮು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಸೈನಿಕರು ಬೆಳಗಿನ ಜಾವ 5.30ರ ವೇಳೆಗೆ ಅಪ್ರಚೋದಿತರಾಗಿ ನಡೆಸಿದ ಈ ದಾಳಿಗೆ ಭಾರತದ ಸೈನಿಕರು ಗುಂಡಿನಿಂದಲೇ ಮಾರುತ್ತರ ನೀಡಿದರು. ಗುಂಡಿನ ಚಕಮಕಿ ವೇಳೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಬಿಎಸ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಯುವಕನನ್ನು ಸಂಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಗುಂಡಿನ ಚಕಮಿಕಿಯಲ್ಲಿ ಯಾವ ಭಾರತೀಯ ಯೋಧರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.