ದೇಶ

ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಗುಂಡಿನ ದಾಳಿಗೆ ಓರ್ವ ಮಹಿಳೆ ಗಾಯ

ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ಪದೇ ಪದೇ ಆಗುತ್ತಿದ್ದು, ಈ ವರೆಗೂ 11 ಬಾರಿ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ. ಗಡಿಯಲ್ಲಿ ಪಾಕ್ ಸೈನಿಕರ ಅಟ್ಟಹಾಸಕ್ಕೆ ಇದೀಗ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ...

ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಗುಂಡಿನ ದಾಳಿಗೆ ಓರ್ವ ಮಹಿಳೆ ಗಾಯ
ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಗುಂಡಿನ ದಾಳಿಗೆ ಓರ್ವ ಮಹಿಳೆ ಗಾಯ (ಸಂಗ್ರಹ ಚಿತ್ರ)
Published On :

ಜಮ್ಮು: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ಪದೇ ಪದೇ ಆಗುತ್ತಿದ್ದು, ಈ ವರೆಗೂ 11 ಬಾರಿ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ. ಗಡಿಯಲ್ಲಿ ಪಾಕ್ ಸೈನಿಕರ ಅಟ್ಟಹಾಸಕ್ಕೆ ಇದೀಗ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಗಾಯಗೊಂಡ ಮಹಿಳೆಯನ್ನು ನಸೀಮಾ ಎಂದು ಹೇಳಲಾಗುತ್ತಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಹಲವು ದಿನಗಳಿಂದಲೂ ಪಾಕಿಸ್ತಾನದ ಸೈನಿಕರಿಂದ ಭಾರತೀಯ ಯೋಧರ ಮೇಲೆ ಅಪ್ರಚೋದಿತ ದಾಳಿ ಮುಂದುವರೆದಿದ್ದು, ಈ ವರೆಗೂ 11 ಬಾರಿ ಭಾರತೀಯ ಯೋಧರ ಮೇಲೆ ದಾಳಿ ಮಾಡಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಹೇಳಿದ್ದಾರೆ.

ಇಂದು ಸಹ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಆಗಸ್ಟ್ ತಿಂಗಳಿಂದ ಇಂದಿನವರೆಗೂ 11 ಬಾರಿ ಅಪ್ರಚೋದಿತ ದಾಳಿ ನಡೆಸಿದೆ. ದಾಳಿಯಲ್ಲಿ ಈ ವರೆಗೂ ಓರ್ವ ಬಿಎಸ್ಎಫ್ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಳೆದ ಜುಲೈ ತಿಂಗಳಲ್ಲಿಯೂ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ 18 ಬಾರಿ ಭಾರತೀಯ ಯೋಧರ ಮೇಲೆ ಅಪ್ರಚೋದಿತ ದಾಳಿ ನಡೆಸಿತ್ತು. ದಾಳಿಯ ಪರಿಣಾಮ 3 ಯೋಧರು ಸಾವನ್ನಪ್ಪಿದ್ದರು. ಅಲ್ಲದೆ, 14 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.