ವಿಜಯಪುರ: ವಿಜಯಪುರದ ಐಸಿಐಸಿಐ ಬ್ಯಾಂಕ್ ಶಾಖೆಯ ಮ್ಯಾನೇಜರ್ ಹಾಗೂ ಕ್ಯಾಶಿಯರ್ ರೂ.1.5 ಕೋಟಿ ಜೊತೆ ಪರಾರಿಯಾಗಿದ್ದಾರೆ. ಬ್ಯಾಂಕ್ ಮ್ಯಾನೇಜರ್ ವಿಜಯ ಸಾರಥಿ ಹಾಗೂ ಕ್ಯಾಶಿಯರ್ ಸಚಿನ ಪಾಟೀಲ ಎಂಬುವರು ಜತೆಗೂಡಿ ಬ್ಯಾಂಕಿನಲ್ಲಿನ ರೂ 1.5 ಕೋಟಿ ತಗೆದುಕೊಂಡು ಬುಧವಾರವೇ ಪರಾರಿಯಾಗಿದ್ದಾರೆ.
ಆಂಧ್ರಪ್ರದೇಶದ ನೆಲ್ಲಗೊಂಡಂ ಜಿಲ್ಲೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸಲು ತಡೆದಿದ್ದಾರೆ. ಆಗ ಇಬ್ಬರು ಕಾರು ಬಿಟ್ಟು ಪರಾರಿಯಾಗಿದ್ದಾರೆ.
ಬ್ಯಾಂಕಿನಲ್ಲಿ ಹಣದ ಲೆಕ್ಕದಲ್ಲಿ ವ್ಯತ್ಯಾಸವಾಗಿದ್ದನ್ನು ತಿಳಿದ ವಿಜಯಪುರದ ಲಿಂಗದ ಗುಡಿ ರಸ್ತೆಯಲ್ಲಿ ಇರುವ ಐಸಿಐಸಿಐ ಬ್ಯಾಂಕ್ ಸಿಬ್ಬಂದಿ ಹುಬ್ಬಳ್ಳಿಯ ಐಸಿಐಸಿಐ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕರಿಗೆ ಸುದ್ದಿ ತಲುಪಿಸಿದ್ದಾರೆ. ಹುಬ್ಬಳ್ಳಿ ಪ್ರಾದೇಶಿಕ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ರಾಮ ಅವರು ವಿಜಯಪುರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ. ಪೊಲೀಸರು ಐಸಿಐಸಿಐ ಬ್ಯಾಂಕ್ ಶಾಖೆಗೆ ತೆರಳಿ ತನಿಖೆ ಕೈಗೊಂಡಿದ್ದಾರೆ.
Advertisement