
ಜಮ್ಮು ಕಾಶ್ಮೀರ: ಪಾಕಿಸ್ತಾನದ ಯೋಧರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪೂಂಚ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ.
ಪಾಕಿಸ್ತಾನ ಪಡೆಗಳು ಇಂದು ಬೆಳಿಗ್ಗೆ 3.30ರ ಸುಮಾರಿನಲ್ಲಿ ಜಮ್ಮು ಮತ್ತು ಕಾಶ್ಮೀರದ ವಲಯದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಶೆಲ್ ಮತ್ತು ಗುಂಡಿನ ದಾಳಿ ನಡೆಸಿವೆ ಎಂದು ರಕ್ಷಣಾ ವಲಯದ ವಕ್ತಾರ ಕರ್ನಲ್ ಮನೀಷ್ ಮೆಹ್ತಾ ಹೇಳಿದ್ದಾರೆ.
ಭಾರತೀಯ ಸೇನಾ ಪಡೆ ಪ್ರತಿದಾಳಿ ನಡೆಸಿದ್ದು, ಗುಂಡಿನ ದಾಳಿ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
Advertisement