ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಲು ಚೆನ್ನೈ ಗೆ ಆಗಮಿಸಿದ ಪ್ರಧಾನಿ ಮೋದಿ

ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಚೆನ್ನೈ ಗೆ ಆಗಮಿಸಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಸ್ವಾಗತಿಸಿದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ
ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಸ್ವಾಗತಿಸಿದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ
Updated on

ಚೆನ್ನೈ: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಚೆನ್ನೈ ಗೆ ಆಗಮಿಸಿದ್ದಾರೆ.

ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಡೆಯಲಿದ್ದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ತಮಿಳುನಾಡು ರಾಜ್ಯಪಾಲ ರೋಸಯ್ಯ, ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಮರೆಯಾಗುತ್ತಿರುವ ಕೈಮಗ್ಗದ ಕಲೆಯನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿರುವ 73 ಅತ್ಯುತ್ತಮ ನೇಕಾರರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪೈಕಿ ಕಾಂಚಿಪುರಂ ನ ಮೂವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.  ಕೈಮಗ್ಗ ದಿನಾಚರಣೆ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯಗೊಳ್ಳುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com