
ನವದೆಹಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ(ಎನ್.ಡಿ.ಆರ್.ಎಫ್) ನ ಅಕಾಡೆಮಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಪ್ರಸ್ತುತ ಇರುವ ರಾಷ್ಟ್ರೀಯ ಫೈರ್ ಸರ್ವಿಸ್ ಕಾಲೇಜು ಮತ್ತು ರಾಷ್ಟ್ರೀಯ ನಾಗರಿಕ ರಕ್ಷಣಾ ಕಾಲೇಜನ್ನು ಎನ್.ಡಿ.ಆರ್.ಎಫ್ ಅಕಾಡೆಮಿಯೊಂದಿಗೆ ವಿಲೀನಗೊಳಿಸಲಾಗುತ್ತದೆ.
ಎನ್.ಡಿ.ಆರ್.ಎಫ್ ಅಕಾಡೆಮಿಯೊಂದಿಗೆ ಈ ಕಾಲೇಜುಗಳನ್ನು ವಿಲೀನಗೊಳಿಸುವುದರಿಂದ ವಿಪತ್ತು ನಿರ್ವಹಣಾ ಸಿಬ್ಬಂದಿಗಳಿಗೆ ಸಿಬ್ಬಂದಿಗೆ ವಿಶೇಷ ತರಬೇತಿ ನೀದುವುದರ ಜೊತೆಗೆ ಅಗ್ನಿಶಾಮಕ ಸೇವೆ, ನಾಗರಿಕ ರಕ್ಷಣೆ, ವಿಪತ್ತು ನಿರ್ವಹಣಾ ತಂಡಗಳ ನಡುವೆ ಉತ್ತಮ ಸಮನ್ವಯತೆ ಸಾಧಿಸಲು ನೆರವಾಗಲಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದಾರೆ.
ದೇಶದಲ್ಲಿ ವಿಪತ್ತು ಎದುರಾದಾಗ ಕಾರ್ಯಾಚರಣೆಗೆ ವಿಮಾನಗಳನ್ನು ರಕ್ಷಣಾ ಇಲಾಖೆಯಿಂದ ಪಡೆಯಲಾಗುತ್ತದೆ ಎಂದು ಕಿರಣ್ ರಿಜಿಜು ರಾಜ್ಯಸಭೆಗೆ ತಿಳಿಸಿದ್ದಾರೆ.
Advertisement