
ನವದೆಹಲಿ: ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಆಗಸ್ಟ್ 23 ಭಾರತಕ್ಕೆ ಭೇಟಿ ನೀಡಲಿದ್ದು, ಭಾರತ- ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆ ನಡೆಯಲಿದೆ.
ಇಸ್ಲಾಮಾಬಾದ್ ನಲ್ಲಿ ಸುದ್ದಿಗೋಠಿಯನ್ನುದ್ದೇಶಿಸಿ ಮಾತನಾಡಿದ ಸರ್ತಾಜ್ ಅಜೀಜ್, ಆಗಸ್ಟ್ 23 ರಂದು ಭಾರತಕ್ಕೆ ಭೇಟಿ ನೀಡುವುದನ್ನು ಸ್ಪಷ್ಟಪಡಿಸಿದ್ದಾರೆ. ಪಾಕ್- ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ಮಾತುಕತೆ ನಡೆಸಲು ಕಳೆದ ತಿಂಗಳು ಭಾರತ ಸರ್ಕಾರ ತೀರ್ಮಾನಿಸಿತ್ತು. ಆದರೆ ಪಾಕಿಸ್ತಾನ ಈ ವರೆಗೂ ದಿನಾಂಕವನ್ನು ಸ್ಪಷ್ಟಪಡಿಸಿರಲಿಲ್ಲ.
ಪ್ರಧಾನಿ ನರೇಂದ್ರ ಮೋದಿ- ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ಮಾತುಕತೆ ವೇಳೆ ನಿಗದಿಯಾದಂತೆ ಭಾರತದ ಸಲಹೆಗಾರ ಅಜಿತ್ ದೋವೆಲ್ ಪಾಕಿಸ್ತಾನದ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಕುರಿತ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎಂಬ ನಿರೀಕ್ಷೆ ಇದೆ.
Advertisement