ಪ್ರಧಾನಿ ಮೋದಿ ಲಲಿತ್ ಮೋದಿಯನ್ನು ಭಾರತಕ್ಕೆ ಕರೆತರಲಿ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಐಪಿಎಲ್ ಹಗರಣದ ಆರೋಪಿ ಲಲಿತ್...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯನ್ನು ಭಾರತಕ್ಕೆ ಕರೆತಂದು ಕಾನೂನಿನ ಮುಂದೆ ನಿಲ್ಲಿಸಲಿ ಎಂದಿದ್ದಾರೆ.

'ನಮಗೆ ಗೊತ್ತು, ಈ ಪ್ರಧಾನಿಗೆ ಸಂಸತ್ತನ್ನು ಎದುರಿಸುವ ಧೈರ್ಯ ಇಲ್ಲ. ಆದರೂ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಲಲಿತ್ ಮೋದಿಯನ್ನು ವಾಪಸ್ ಭಾರತಕ್ಕೆ ಕರೆ ತರುವಂತೆ ಒತ್ತಡ ಹೇರುತ್ತೇವೆ' ಎಂದಿದ್ದಾರೆ.

ಪ್ರಧಾನಿ ತಮಗೆ ಭಯ ಇಲ್ಲ ಅಂತ ಸಾಭೀತುಪಡಿಸಲಿ ಮತ್ತು ಲಿಲಿತ್ ಮೋದಿಯನ್ನು ಭಾರತಕ್ಕೆ ಕರೆತರಲಿ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ನಿನ್ನೆ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಬೋಫೋರ್ಸ್ ಹಗರಣದಲ್ಲಿ ನ್ಯಾಯಾಲಯ ರಾಜೀವ್ ಗಾಂಧಿ ಅವರಿಗೆ ಕ್ಲೀನ್‌ಚಿಟ್ ನೀಡಿದೆ. ಆದರೂ ಕಳೆದ 30 ವರ್ಷಗಳಿಂದ ಅದನ್ನೇ ಹೇಳುತ್ತಿದ್ದಾರೆ ಎಂದಿದ್ದಾರೆ.

ಸುಷ್ಮಾ ಸ್ವರಾಜ್ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ನಿನ್ನೆ ಸಂಸತ್ತಿನಲ್ಲಿ ಕಪ್ಪು ಹಣದ ಜಾಲವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜಕೀಯ ವ್ಯವಸ್ಥೆ ಮತ್ತು ಕಪ್ಪುಹಣದೊಂದಿಗೆ ಲಲಿತ್ ಮೋದಿ ನಂಟು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com