ನಿತಿಶ್ ನೇತೃತ್ವದ 'ಮಹಾ ಮೈತ್ರಿ'ಯಲ್ಲಿ ಬಿರುಕು, ಸೀಟು ಹಂಚಿಕೆಗೆ ಎನ್ ಸಿಪಿ ಆಕ್ಷೇಪ

ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಜಾತ್ಯತೀತ ಮಹಾ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸೀಟು ಹಂಚಿಕೆಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ ಸಿಪಿ)...
ನಿತಿಶ್ ಕುಮಾರ್
ನಿತಿಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಜಾತ್ಯತೀತ ಮಹಾ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸೀಟು ಹಂಚಿಕೆಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ ಸಿಪಿ) ಆಕ್ಷೇಪ ವ್ಯಕ್ತಪಡಿಸಿದೆ.

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಕೇವಲ ಮೂರು ಸ್ಥಾನಗಳನ್ನು ನೀಡುವ ಮೂಲಕ ಅವಮಾನಿಸಲಾಗಿದೆ ಎಂದು ಎನ್ ಸಿಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ತಾರಿಖ್ ಅನ್ವರ್ ಅವರು ಹೇಳಿದ್ದಾರೆ. ಅಲ್ಲದೆ ನಮಗೆ 12 ಸ್ಥಾನಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮೈತ್ರಿಯಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ, ಸೀಟು ಹಂಚಿಕೆಗೂ ಮುನ್ನ ನಮ್ಮನ್ನು ಸಂಪರ್ಕಿಸಿಲ್ಲ. ಇದರಿಂದ ನಮಗೆ ಅವಮಾನವಾಗಿದ್ದು, ಇದನ್ನು ನಾವು ಸಹಿಸಿಕೊಳ್ಳುವುದಿಲ್ಲ ಎಂದಿದ್ದಾರೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಮಹಾ ಮೈತ್ರಿ ಮಾಡಿಕೊಂಡಿದ್ದ ಜೆಡಿಯು, ಆರ್ ಜೆಡಿ, ಕಾಂಗ್ರೆಸ್ ಹಾಗೂ ಎನ್ ಸಿಪಿ ನಿನ್ನೆ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ್ದವು.

ಜೆಡಿಯು, ಆರ್ ಜೆಡಿ ತಲಾ 100 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು ನಿತಿಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಈ ಇನ್ನುಳಿದ ಮೂರು ಸ್ಥಾನಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿದ್ದ ನಿತಿಶ್, ಆ ಮೂರು ಸ್ಥಾನಗಳನ್ನು ಎನ್ ಸಿಪಿಗೆ ನೀಡುವ ಸೂಚನೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com