ರಾಧೆ ಮಾಗೆ ಮಧ್ಯಂತರ ಜಾಮೀನು ನೀಡಿದ ಬಾಂಬೈ ಕೋರ್ಟ್

ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಸ್ವಯಂಘೋಷಿತ ದೇವ ಮಹಿಳೆ ರಾಧೆ ಮಾಗೆ ಬಾಂಬೈ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ...
ರಾಧೆ ಮಾ
ರಾಧೆ ಮಾ
ಮುಂಬೈ: ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಸ್ವಯಂಘೋಷಿತ ದೇವ ಮಹಿಳೆ ರಾಧೆ ಮಾಗೆ ಬಾಂಬೈ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 
ರಾಧೆ ಮಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ಥಳೀಯ ಕೋರ್ಟ್ ವಜಾಗೊಳಿಸಿತ್ತು. ಆ ಸಂಬಂಧ ರಾಧೆ ಮಾ ಬಾಂಬೈ ಹೈಕೋರ್ಟ್ ಗೆ ನಿರೀಕ್ಷೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸ್ಥಳೀಯ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ, 2 ವಾರಗಳ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 
ರಾಧೇ ಮಾಗೆ 2 ವಾರಗಳ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ರಾಧೇ ಮಾ ಆ.19 ಮತ್ತು 26ರಂದು ಪೊಲೀಸರ ಮುಂದೆ ಹಾಜರಾಗಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com