
ನವದೆಹಲಿ: ಒನ್ ರ್ಯಾಂಕ್ ಒನ್ ಪೆನ್ಷನ್ ಆಗ್ರಹಿಸಿ ನಿವೃತ್ತ ಸೇನಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವ ಭರವಸೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒನ್ ರ್ಯಾಂಕ್ ಒನ್ ಪೆನ್ಷನ್‌ಗೆ ಆಗ್ರಹಿಸಿ ನಿವೃತ್ತ ಸೈನಿಕರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಹುಲ್ ಗಾಂಧಿ ಧರಣಿ ಸ್ಥಳಕ್ಕೆ ಆಗಮಿಸಿದ ನಿವೃತ್ತ ಸೈನಿಕರಿಗೆ ತಮ್ಮ ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಮೋದಿ ಅವರು ಈ ಕೂಡಲೇ ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವ ದಿನಾಂಕವನ್ನು ಘೋಷಿಸಬೇಕು ಎಂದು ಆಗ್ರಹಿಸಿದರು.
ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೊಳಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದರು. ಆ ಭರವಸೆಯನ್ನು ಕೂಡಲೇ ಈಡೇರಿಸಬೇಕು ಎಂದರು.
ಒನ್ ರ್ಯಾಂಕ್ ಒನ್ ಪೆನ್ಷನ್ ಜಾರಿಗೆ ಆಗ್ರಹಿಸಿ ನಿವೃತ್ತ ಸೈನಿಕರು ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲು ದೆಹಲಿ ಪೊಲೀಸರು ಯತ್ನಿಸಿದರು. ಆದರೆ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರೆಸಲು ಅವಕಾಶ ನೀಡಲಾಗಿದೆ.
Advertisement