ದೆಹಲಿ ಮುಖ್ಯಮಂತ್ರಿ ಹೆಸರಿನಲ್ಲಿ ಶಾಲಾ ಮಕ್ಕಳಿಂದ ಪ್ರದರ್ಶನ; ಎಲ್ಲೆಡೆ ವ್ಯಾಪಕ ಟೀಕೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ವಿವಾದದ ಸುದ್ದಿಯಾಗಿದ್ದಾರೆ. ಶನಿವಾರ ದೆಹಲಿಯ...
ದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ದಿನಾಚರಣೆಗೆ ಸಾಂಸ್ಕೃತಿಕ ಪ್ರದರ್ಶನ
ದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ದಿನಾಚರಣೆಗೆ ಸಾಂಸ್ಕೃತಿಕ ಪ್ರದರ್ಶನ
Updated on

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ವಿವಾದದ ಸುದ್ದಿಯಾಗಿದ್ದಾರೆ. ಶನಿವಾರ ದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ಶಾಲಾ ಮಕ್ಕಳು ರಾಷ್ಟ್ರಾಭಿಮಾನವನ್ನು ಪ್ರತಿನಿಧಿಸುವ ಪ್ರದರ್ಶನಗಳನ್ನು ನೀಡದೆ ಮುಖ್ಯಮಂತ್ರಿ ಹೆಸರಿನಲ್ಲಿ ವಿವಿಧ ಸಾಂಸ್ಕೃತಿಕ ಪ್ರದರ್ಶನ ನೀಡಿರುವುದನ್ನು ಹಲವರು ಕಟುವಾಗಿ ಟೀಕಿಸಿದ್ದಾರೆ.
ಆಪ್ ನ ಮಾಜಿ ಮುಖಂಡರಾದ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಇದನ್ನು ವಿರೋಧಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಬಂದಾಗ ನನಗೆ ಈ ಬಗ್ಗೆ ಅರಿವು ಇರಲಿಲ್ಲ. ದೆಹಲಿ ಸರ್ಕಾರದ ಯಾವುದೇ ಮುಖ್ಯ ಅತಿಥಿಗಳಿಗೆ ಸಂಬಂಧಪಟ್ಟ ಪ್ರದರ್ಶನ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಆದರೆ ಇದು ಕೆಟ್ಟ ಪದ್ಧತಿ. ಮುಂದಿನ ದಿನಗಳಲ್ಲಿ ಇದನ್ನು ನಿಲ್ಲಿಸಲು ಸೂಚನೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com