

ಕೋಲ್ಕತಾ: ರಾಷ್ಟ್ರಕ್ಕಾಗಿ ಏಕತೆಯಿಂದ ಚಿಂತಿಸೋಣ, ಮಾತನಾಡೋಣ ಮತ್ತು ಕೆಲಸ ಮಾಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.
69ನೇ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ದೇಶದ ಜನತೆ ಶುಭಾಶಯ ಕೋರಿರುವ ಅವರು, ರಾಷ್ಟ್ರಕ್ಕಾಗಿ ನಮ್ಮನ್ನು ಸಮರ್ಪಿಸಿಕೊಳ್ಳಬೇಕಿದ್ದು, ನಮ್ಮ ದೇಶದ ಅಣ್ಣ-ತಮ್ಮ, ಅಕ್ಕ-ತಂಗಿಯರಿಗಾಗಿ ಸೇವೆ ಸಲ್ಲಿಸೋಣ ಎಂದು ಹೇಳಿದ್ದಾರೆ.
ಈ ಐತಿಹಾಸಿಕ ಸ್ವಾತಂತ್ರ್ಯ ದಿನ ನಮ್ಮೆಲ್ಲರಲ್ಲೂ ಸಂತೋಷವನ್ನುಂಟು ಮಾಡುವಂತೆ ಮಾಡಿದೆ, ನಮ್ಮ ದೇಶದ ಬಗ್ಗೆ ಹಾಗೂ ನಮ್ಮ ಸ್ವಾತಂತ್ರ್ಯದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.