

ಭೋಪಾಲ್: ವ್ಯಾಪಂ ಹಗರಣ ಮಧ್ಯಪ್ರದೇಶದಲ್ಲಿ ಬಿಜೆಪಿಯ ಜನಪ್ರಿಯತೆಯನ್ನು ತಗ್ಗಿಸಿಲ್ಲ. ಇಲ್ಲಿ ನಡೆದ 10 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ವಿಜಯದ ನಗೆ ಬೀರಿದೆ.
ಆ.12 ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು. ಮೊರೆನಾ, ಉಜ್ಜೈನ್, ಹಾರ್ದಾ, ಚಕ್ ಘಾಟ್, ಭೈಂಸ್ ದೇಹಿ, ಕೋಟಾರ್, ಸುವಾಸರ ಮತ್ತು ವಿದಿಶಾದಲ್ಲಿ ಬಿಜೆಪಿ ಜಯ ಸಾಧಿಸಿದ್ದಾರೆ, ಸಾರಂಗ್ ಪುರ ಮತ್ತು ಗುಹ್ವಾರದಲ್ಲಿ ಕ್ರಮವಾಗಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಫಲಿತಾಂಶಕ್ಕೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಮೇಲೆ ನಂಬಿಕೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.