ದೇಶ

ಮಹಾರಾಷ್ಟ್ರದಲ್ಲೊಂದು ಮರ್ಯಾದಾ ಹತ್ಯೆ

ಮಹಾರಾಷ್ಟ್ರದಲ್ಲೊಂದು ಮರ್ಯಾದಾ ಹತ್ಯೆ
ಮಹಾರಾಷ್ಟ್ರದಲ್ಲೊಂದು ಮರ್ಯಾದಾ ಹತ್ಯೆ (ಸಂಗ್ರಹ ಚಿತ್ರ)
Published On :

ಥಾಣೆ (ಮಹಾರಾಷ್ಟ್ರ): ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾದ (24) ಯುವಕನೊಬ್ಬನನ್ನು ಮರ್ಯಾದಾ ಹತ್ಯೆ ಮಾಡಿರುವ ಘಟನೆಯೊಂದು ಭಿವಂಡಿ ತೆಹಶೀಲ್‌ನ ಜಹೂ ನಂದೂರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸತ್ಯಂ ಕರ್ಬಾರಿ ಎಂಬುವವನೇ ಮರ್ಯಾದಾ ಹತ್ಯೆಗೊಳಗಾದ ಯುವಕನಾಗಿದ್ದು, ಮೂರು ವರ್ಷಗಳ ಹಿಂದಷ್ಟೇ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿದ್ದ. ನಿನ್ನೆ ರಾತ್ರಿ 17 ಜನರ ಗುಂಪೊಂದು ಸತ್ಯಂ ಕರ್ಬಾರಿ ಮೇಲೆ ದಾಳಿ ಮಾಡಿ ಹರಿತವಾದ ಆಯುಧ ಬಳಸಿ ಆತನನ್ನು ಕೊಚ್ಚಿ ಕೊಂದಿದ್ದು, ಇದೊಂದು ಮರ್ಯಾದಾ ಹತ್ಯೆಯಾಗಿದೆ ಎಂದು ಭಿವಂಡಿ ಪೊಲೀಸ್ ಠಾಣೆಯ ಪಿಎಸ್ಐ ವಿಜಯ್ ಶೀರ್ಷತ್ ತಿಳಿಸಿದ್ದಾರೆ.

ದಾಳಿಯಿಂದಾಗಿ ಸತ್ಯಂ ಕರ್ಬಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪ್ರಸ್ತುತ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದಾಳಿ ಮಾಡಿದ ಆರೋಪಿಗಳ ಪೈಕಿ ಪ್ರಮುಖ ಆರೋಪಿ ಯುವತಿಯ ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ಆರೋಪಿಗಳ ವಿರುದ್ಧ ಇದೀಗ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.