
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉಧಾಂಪುರದಲ್ಲಿ ಜೀವಂತವಾಗಿ ಸೆರೆಸಿಕ್ಕಿ ಪಾಕಿಸ್ತಾನದ ಉಗ್ರ ಮೊಹಮ್ಮದ್ ನಾವೇದ್ ಯಾಕೂಬ್‌ನನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಸೋಮವಾರ ಪಟಿಯಾಲ ಹೌಸ್‌ಕೋರ್ಟ್ ಅನುಮತಿ ನೀಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನಾಳೆ ಪರೀಕ್ಷೆಗೆ ಒಳಪಡಿಸಲಿದೆ.
ಉಗ್ರ ನಾವೇದ್‌ನನ್ನು ಇಂದು ದೆಹಲಿಯ ಪಟಿಯಾಲಹೌಸ್ ಕೋರ್ಟ್‌ಗೆ ಹಾಜರುಪಡಿಸಿದ ಎನ್‌ಐಎ ಅಧಿಕಾರಿಗಳು, ಆರೋಪಿಯನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ಪಡೆದುಕೊಂಡರು.
ಲಷ್ಕರ್-ಇ-ತೋಯಿಬಾ ಸಂಘಟನೆಯ ಉಗ್ರ ನಾವೇದ್‌ಗೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಲೋದಿ ರಸ್ತೆಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲದಲ್ಲಿ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಆಗಸ್ಟ್ 5ರಂದು ಉಧಾಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಎಸ್ಎಫ್ ಬಸ್ ಮೇಲೆ ನಡೆದ ಉಗ್ರರ ದಾಳಿಯ ವೇಳೆ ನಾವೇದ್ ನನ್ನು ಬಂಧಿಸಲಾಗಿತ್ತು.
Advertisement