

ಜಮ್ಮು: ಜಮ್ಮುವಿನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರಿಂದ ಮತ್ತೆ ಅಪ್ರಚೋದಿತ ಗುಂಡಿನ ದಾಳಿಯಾಗಿರುವುದಾಗಿ ಸೋಮವಾರ ತಿಳಿದುಬಂದಿದೆ.
ಜಮ್ಮುವಿನ ಪೂಂಚ್ ಜಿಲ್ಲೆಯ ಸೌಜಿಯಾನ ಮತ್ತು ಮಂಡಿ ಸೆಕ್ಟರ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿತ್ತು, ನಿನ್ನೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 1 ಘಟನೆಯವರೆಗೂ ಗುಂಡಿನ ದಾಳಿ ನಡೆಸಿದೆ. ಅಲ್ಲದೆ, ಚಿಕ್ಕ ಶಸ್ತ್ರಾಸ್ತ್ರಗಳು, 120 ಎಂಎಂ ಹಾಗೂ 82 ಎಂಎಂ ಶೆಲ್ ಗಳ ಮೂಲಕ ದಾಳಿ ನಡೆಸಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಹೇಳಿದ್ದಾರೆ.
ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಈ ವರೆಗೂ ಮುಂದುವರೆದಿದ್ದು, ಪಾಕಿಸ್ತಾನ ಸೇನೆ ಗುಂಡಿನ ದಾಳಿಗೆ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಘಟನೆಯಲ್ಲಿ ಸಾವು, ನೋವುಗಳು ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.