
ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಗುರುದ್ವಾರದ ಮಣಿಕರನ್ ಸಾಹಿಬ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಮತ್ತು 9ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಇದುವರೆಗೆ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು, ಗುರುದ್ವಾರಕ್ಕೆ ಭೇಟಿ ನೀಡಿದ ಹಲವು ಭಕ್ತರು ಹಾಗೂ ಸರ್ಕಾರಿ ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದಾರೆ.
ಭಾರಿ ಭೂಕುಸಿತದಿಂದಾಗಿ ಹಲವು ಬಹು ಮಹಡಿ ಕಟ್ಟಡಗಳು ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
Advertisement