
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ನಿರಾಳವಾಗಿದ್ದಾರೆ.
ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಜಾರಿ ನಿರ್ದೇಶನಲಾಯ ಪ್ರಕರಣದ ತನಿಖೆಯನ್ನೇ ಮುಕ್ತಾಯಗೊಳಿಸಲಿದೆ ಎಂದು ಮಾಧ್ಯಮ ಗಳು ವರದಿ ಮಾಡಿವೆ.
ಸದ್ಯ ಪ್ರಕಟಣೆ ನಿಲ್ಲಿಸಿರುವ ದೈನಿಕ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಖರೀದಿ ವ್ಯವಹಾರದಲ್ಲಿ ಭಾರಿ ಹಣಕಾಸು ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ನ್ಯಾಯಾಲಯದ ಮೊರೆ ಹಯೋಗಿದ್ದರು.
ಸ್ವಾಮಿ ಪ್ರಕಾರ, ಈ ಪ್ರಕರಣದಲ್ಲಿ ರು.2000 ಕಯೋಟಿ ಅಕ್ರಮ ನಡೆದಿದೆ. ಸ್ವಾಮಿ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಲವರಿಗೆ ಸಮನ್ಸ್ ಜಾರಿ ಮಾಡಿತ್ತು.
Advertisement