
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಬರದ ಪರಿಸ್ಥಿತಿ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 98ರಿಂದ 114ಕ್ಕೆ ಹೆಚ್ಚಾಗಿದೆ. ಬರ ಪರಿಹಾರ ತುರ್ತು ಕಾಮಗಾರಿ ಕೈಗೊಳ್ಳಲು ರು.149 ಕೋಟಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ರಾಜ್ಯದ 26 ಜಿಲ್ಲೆಗಳ 114 ತಾಲೂಕುಗಳಲ್ಲಿ ಬರ ಇದೆ. ಆಗಸ್ಟ್ ಅಂತ್ಯದ ವೇಳೆಗೆ ಮತ್ತಷ್ಟು ತಾಲೂಕುಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ. ಕುಡಿಯುವ ನೀರು ಪೂರೈಕೆಗೆ ಬೋರ್
ವೆಲ್ ಕೊರೆಸಲು ರು.75 ಕೋಟಿ, ಉದ್ಯೋಗ ಖಾತರಿಗೆ ರು.50 ಕೋಟಿ ಸೇರಿದಂತೆ ತುರ್ತು ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲಾ- ಗಿದೆ ಎಂದು ಸುದ್ದಿಗಾರರಿಗೆ ಸೋಮವಾರ
ಹೇಳಿದರು.
ರಾಜ್ಯದ 6000 ಗ್ರಾಮ ಪಂಚಾಯಿತಿಗಳ ವಿಶೇಷ ಗ್ರಾಮಸಭೆ ಆ.20 ರಂದು ನಡೆಯಲಿದ್ದು, ಮುಖ್ಯಮಂತ್ರಿ-ಯವರು ಎಲ್ಲ ಹಂತದ ಜನಪ್ರತಿನಿಧಿಗಳು ಈ ಗ್ರಾಮ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ಮೊಟ್ಟ ಮೊದಲ ಬಾರಿ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿದಂತೆ ವಿವಿಧ ಹಂತಗಳ ನಾಯಕರು ಗ್ರಾಮಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
Advertisement