ಗಡಿಯಲ್ಲಿ ಶಂಕಾಸ್ಪದ ಚಟುವಟಿಕೆ: ಬಿಎಸ್ ಎಫ್ ಯೋಧರಿಂದ ಗುಂಡಿನ ದಾಳಿ

ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಗಳ (ಬಿಎಸ್ ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗಡಿಯಲ್ಲಿ ಯೋಧನ ಪಹರೆ (ಸಂಗ್ರಹ ಚಿತ್ರ)
ಗಡಿಯಲ್ಲಿ ಯೋಧನ ಪಹರೆ (ಸಂಗ್ರಹ ಚಿತ್ರ)

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಶಂಕಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆಗಳ (ಬಿಎಸ್ ಎಫ್) ಯೋಧರು  ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ನಲ್ಲಿ ಗುರುವಾರ ಗುಂಡಿನ ಮೊರೆತ ಕೇಳಿಬಂದಿದ್ದು, ಉಗ್ರರು ಭಾರತದ ಗಡಿಯೊಳಗೆ ಒಳನುಸುಳಲು ಯತ್ನಿಸುತ್ತಿದ್ದ ವೇಳೆಯಲ್ಲಿ ಯೋಧರು  ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸೇನೆಯ ಹಿರಿಯ ಅಧಿಕಾರಿಗಳು ಸಭೆ ಸೇರಿದ್ದು, ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.  ಅಲ್ಲದೆ ಗಡಿಯಲ್ಲಿ ಪಹರೆ ಕಾಯುವ ಭದ್ರತಾ ಪಡೆಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಧಮ್ ಪುರ ಉಗ್ರರ ದಾಳಿ ಪ್ರಕರಣದಲ್ಲಿ ನವೀದ್ ಎಂಬ ಉಗ್ರಗಾಮಿ ಸೆರೆಸಿಕ್ಕ ಬಳಿಕ ಭಾರತ ಮತ್ತು ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿನ ಭದ್ರತೆಯಲ್ಲಿ ಹೆಚ್ಚಿಸಲಾಗಿದೆ. ಇದೇ  23ರಂದು ಉಭಯ ದೇಶಗಳ ಭದ್ರತಾ ಸಲಹೆಗಾರರ ಸಭೆ ನಡೆಯಲಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com