

ನವದೆಹಲಿ: ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 71 ನೇ ಜನ್ಮದಿನ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರಿಗೆ ಟ್ವಿಟರ್ ನಲ್ಲಿ ನಮನ ಸಲ್ಲಿಸಿದ್ದಾರೆ.
1944 ರ ಆಗಸ್ಟ್ 20 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, ತಾಯಿಯ ನಿಧನದ ನಂತರ ಭಾರತದ 7ನೇ ಪ್ರಧಾನಿಯಾಗಿ 1984 ರಿಂದ 1989ರವರೆಗೆ ಕಾರ್ಯ ನಿರ್ವಹಿಸಿದ್ದರು. 1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು.