ಮೋದಿ ವಿರುದ್ಧ ವಾಗ್ದಾಳಿಗೆ ರವಿಶಂಕರ್ ಪ್ರಸಾದ್ ತಿರುಗೇಟು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ...
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್
Updated on: 

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಒಂದೇ ವೇದಿಕೆಯಲ್ಲಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಭ್ರಷ್ಟಾಚಾರದ ವಿರುದ್ಧ ಅರವಿಂದ್ ಕೇಜ್ರಿವಾಲ್ ಅವರ ಬದ್ಧತೆಯನ್ನು ಪ್ರಶ್ನಿಸಿದರು. ಬಿಹಾರಕ್ಕೆ ವಿಶೇಷ ವರ್ಗ ಸ್ಥಾನಮಾನ ನೀಡಬೇಕೆಂಬ ನಿತೀಶ್ ಕುಮಾರ್ ಬೇಡಿಕೆ ಹಿಂದೆ ಅವರ ರಾಜಕೀಯ ಹಿತಾಸಕ್ತಿ ಇದೆ ಎಂದರು.

ಬಿಹಾರಕ್ಕೆ ಪ್ರಧಾನಮಂತ್ರಿಗಳು ನೀಡಿದ ವಿಶೇಷ ಪ್ಯಾಕೇಜ್ ಘೋಷಣೆಯ ಹಿಂದೆ ರಾಜಕೀಯ ಉದ್ದೇಶವಿದೆ ಎಂಬ ಆರೋಪವನ್ನು ಇದೇ ಸಂದರ್ಭದಲ್ಲಿ ಅವರು ತಳ್ಳಿಹಾಕಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾಚನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದ ಮತ್ತು ದೇಶದ ಪೂರ್ವ ಭಾಗದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಗಮನಹರಿಸಿದ್ದಾರೆ. ಇದರ ಹಿಂದೆ ರಾಜಕೀಯ ಅಜೆಂಡಾ ಇಲ್ಲ. ಬಿಹಾರದವನಾಗಿ ನನಗೆ ಆ ರಾಜ್ಯಕ್ಕೆ ನೆರವಿನ ಅಗತ್ಯವಿದೆ ಎಂದು ಅನಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಬಿಹಾರಕ್ಕೆ ನೀಡಿರುವ ಪ್ಯಾಕೆಜ್ ಬಗ್ಗೆ ಮೂವರನ್ನು ಹೊರತುಪಡಿಸಿ ಎಲ್ಲಾ ಬಿಹಾರದ ಮಂದಿ ಖುಷಿಗೊಂಡಿದ್ದಾರೆ.ಅವರೇ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಮತ್ತು ರಾಹುಲ್ ಗಾಂಧಿ. ಬಿಹಾರಕ್ಕೆ ಅಷ್ಟೊಂದು ನೆರವಿನ ಪ್ಯಾಕೇಜ್ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿಯಾಗಿ ಕೃತಜ್ಞತೆ ಕೂಡ ಹೇಳಿಲ್ಲ ಎಂದು ನಿತೀಶ್ ಕುಮಾರ್ ಅವರನ್ನು ಆರೋಪಿಸಿದರು.

ನಿನ್ನೆ ದೆಹಲಿಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ನಿತೀಶ್ ಕುಮಾರ್ ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ಅಲ್ಲಿ ಈ ಇಬ್ಬರು ನಾಯಕರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೇಜ್ರಿವಾಲ್, ಮೋದಿಯವರು ಚುನಾವಣಾ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿಲ್ಲ. ಬದಲಾಗಿ ಹಣದ ಪ್ಯಾಕೇಜ್ ಮೂಲಕ ಮತಗಳನ್ನು ಖರೀದಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ನಿತೀಶ್ ಕುಮಾರ್ ಗೆ ಚುನಾವಣೆಯಲ್ಲಿ ಬೆಂಬಲ ಸೂಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com