ದೇಶ

ಪಾಕ್ ಉಗ್ರ ನಾವೇದ್ ಗೆ ನೆರವು ನೀಡಿದ್ದ ಟ್ರಕ್ ಚಾಲಕನ ಬಂಧನ

ಜಮ್ಮು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ಆಗಸ್ಟ್ 5ರಂದು ಬಿಎಸ್ಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಜೀವಂತವಾಗಿ ಸೆರೆಸಿಕ್ಕಿದ್ದ...

ಪಾಕ್ ಉಗ್ರ ನಾವೇದ್ ಗೆ ನೆರವು ನೀಡಿದ್ದ ಟ್ರಕ್ ಚಾಲಕನ ಬಂಧನ
ಉಗ್ರ ನಾವೇದ್
Published On :
ಶ್ರೀನಗರ: ಜಮ್ಮು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ ಆಗಸ್ಟ್ 5ರಂದು ಬಿಎಸ್ಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಜೀವಂತವಾಗಿ ಸೆರೆಸಿಕ್ಕಿದ್ದ ಪಾಕಿಸ್ತಾನದ ಉಗ್ರ ಮೊಹಮ್ಮದ್ ನಾವೇದ್ ಯಾಕೂಬ್ ಗೆ ನೆರವು ನೀಡಿದ್ದ ಆರೋಪದಡಿ ಟ್ರಕ್ ಚಾಲಕನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬಂಧಿಸಿದೆ.
ಬಂಧಿತ ನಾವೇದ್ ನ ವಿಚಾರಣೆ ವೇಳೆ ತನಗೆ ಟ್ರಕ್ ಡ್ರೈವರ್ ನೆರವು ನೀಡಿರುವ ಅಂಶ ಬೆಳಕಿಗೆ ಬಂದಿದ್ದು, ಭದ್ರತಾ ಸಂಸ್ಥೆ ಆತನ ಸೆರೆಗೆ ಬಲೆ ಬೀಸಿತ್ತು.
ಆಗಸ್ಟ್ 5ರಂದು ನಡೆದ ಘಟನೆಯಲ್ಲಿ ಯಾಕೂಬ್ ಜೊತೆಗೆ ಬಂದಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ನೋಮಾನ್ ಅಲಿಯಾಸ್ ಮೋಮಿನ್ ಬಿಎಸ್ಎಫ್ ಯೋಧರ ದಾಳಿಯಲ್ಲಿ ಸಾವನ್ನಪ್ಪಿದ್ದ. ನಾವೀದ್ ಮತ್ತು ಆತನ ಸಹಚರರಿಗೆ ಉದ್ಯಮಿಯೊಬ್ಬ 5 ಲಕ್ಷ ರು. ಕೊಟ್ಟಿದ್ದ ಎಂಬ ವಿಚಾರ ವಿಚಾರಣೆಯಲ್ಲಿ ನವೀದ್ ಬಾಯಿ ಬಿಟ್ಟಿದ್ದ.
ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ ನವೀದ್ ಗೆ ಸುಳ್ಳುಪತ್ತೆ ಪರೀಕ್ಷೆ ಮಾಡಿಸಿದ್ದು, ಹಲವಾರು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನವೀದ್ ವಿರುದ್ಧ ಭಾರತೀಯ ದಂಡ ಸಂಹಿತೆ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.