
ಇಸ್ಲಾಮಾಬಾದ್: ಭಾರತವೇ ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.
ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಾತುಕತೆಗೆ ಸಂಬಂಧಿಸಿದಂತೆ ಪಾಕ್ ಎನ್ಎಸ್ಎ ಸರ್ತಾಜ್ ಅಜೀಜ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಏಜಾಜ್ ಅಹಮದ್ ಚೌಧರಿ, ಕದನ ವಿರಾಮ ಉಲ್ಲಂಘನೆ ನಡೆಯುತ್ತಿರುವುದು ಭಾರತದಿಂದ, ಕಳೆದ ಎರಡು ತಿಂಗಳಲ್ಲಿ ಭಾರತ 100 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ.
ಸಶಸ್ತ್ರಪಡೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದರಿಂದ ಪಾಕಿಸ್ತಾನದ ನಾಗರಿಕರು ಸಾವನ್ನಪ್ಪುತ್ತಿದ್ದಾರೆ. ಭಾರತ ಮಾತ್ರ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದು 2003 ರ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸುತ್ತಿದೆ ಎಂದು ಎಂದು ಏಜಾಜ್ ಅಹಮದ್ ಚೌಧರಿ ಹೇಳಿದ್ದಾರೆ.
Advertisement