ಶೀಘ್ರವೇ ಆಂಧ್ರ ಮತ್ತು ತೆಲಂಗಾಣ ಸಮಸ್ಯೆ ಇತ್ಯರ್ಥ: ರಾಜನಾಥ್ ಸಿಂಗ್

ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ನಡುವಿನ ಬಿಕ್ಕಟ್ಟು ಪರಿಹರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ...
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Updated on: 

ನವದೆಹಲಿ: ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ನಡುವಿನ ಬಿಕ್ಕಟ್ಟು ಪರಿಹರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ನಡುವೆ ಇರುವ ಎಂಥಹುದ್ದೇ ಸಮಸ್ಯೆಯನ್ನು ಬಗೆ ಹರಿಸಲು ಕೇಂದ್ರ ಸರ್ಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದ್ದು, ಆಂಧ್ರ ಪ್ರದೇಶ ಪುನರ್ ಸಂಘಟನೆ ಕಾಯ್ದೆಯಡಿ ಶೀಘ್ರವೇ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದಿದ್ದಾರೆ.

ಆಂಧ್ರ ಪ್ರದೇಶ 2 ರಾಜ್ಯಗಳಾಗಿ ವಿಂಗಡನೆಯಾದ ನಂತರ ಆಸ್ತಿ ಮತ್ತು ಸ್ವತ್ತುಗಳ ವಿಂಗಡನೆ ವಿಚಾರದಲ್ಲಿ ಆಂಧ್ರ ಪ್ರದೇಶ ಸರ್ಕಾರ ದೂರ ಉಳಿದಿದೆ. ಎರಡು ರಾಜ್ಯಗಳಿಗೆ ಸಿಗಬೇಕಾದ ಸ್ವತ್ತು ಮತ್ತು ಹೊಣೆಗಾರಿಕೆ ಹಂಚಿಕೆಯಾದರೇ ಎರಡು ರಾಜ್ಯಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com