ಜಮ್ಮು: ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಮೂವರು ನಾಗರಿಕರು ಮೃತಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ಬಳಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಸೇರಿ ಮೂವರು ನಾಗರಿಕರು ಮೃತಪಟ್ಟಿದ್ದು, 15 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಪ್ರತ್ಯುತ್ತರ ನೀಡಿದ್ದಾರೆ.