
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯಾಗುತ್ತಿರುವುದರ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಆಡಳಿತ ಪಕ್ಷ ಪಿಡಿಪಿ, ಮೋದಿ ಸರ್ಕಾರ ವಾಜಪೇಯಿ ಅವರಂತೆಯೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಎನ್ ಡಿಎ ಸರ್ಕಾರ, ಕದನ ವಿರಾಮ ಉಲ್ಲಂಘನೆ ಬಗ್ಗೆ ಪಾಕಿಸ್ತಾನದೊಂದಿಗೆ ಸೌಹಾರ್ದಯುತವಾದ ಒಪ್ಪಂದ ಮಾಡಿಕೊಂಡ ರೀತಿಯಲ್ಲೇ ಮೋದಿ ಸರ್ಕಾರವೂ ಒಪ್ಪಂದ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪಿಡಿಪಿ ನಾಯಕ, ವಿಧಾನ ಪರಿಷತ್ ನಾಯಕ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.
2003 ರ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ್ ಉಲ್ಲಂಘನೆ ಮಾಡುತ್ತಿರುವುದಕ್ಕೆ ವಿಕ್ರಮಾದಿತ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ದಾಳಿಗೆ ಮೃತಪಟ್ಟ ಮೂವರು ನಾಗರಿಕರ ಕುಟುಂಬಗಳಿಗೆ ಪಿಡಿಪಿ ನಾಯಕ ಸಂತಾಪ ಸೂಚಿಸಿದ್ದಾರೆ.
ಮಾನವೀಯ ದೃಷ್ಟಿಯಿಂದ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಮಾತುಕತೆಯನ್ನು ಮುಂದುವರೆಸಬೇಕೆಂದು ವಿಕ್ರಮಾದಿತ್ಯ ಸಿಂಗ್ ಒತ್ತಾಯಿಸಿದ್ದಾರೆ.
Advertisement