1965ರ ಭಾರತ-ಪಾಕ್ ಯುದ್ಧದಲ್ಲಿ ಮಡಿದವರಿಗೆ ಪ್ರಧಾನಿ ನಮನ

1965ರ ಭಾರತ-ಪಾಕಿಸ್ತಾನ ಯುದ್ಧದ 50ನೇ ವರ್ಷಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಸೈನಿಕ ವೃಂದಕ್ಕೆ...
1965ರ ಭಾರತ-ಪಾಕಿಸ್ತಾನ ಯುದ್ಧದ 50ನೇ ವರ್ಷಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ  ಗೌರವ ಸಲ್ಲಿಸಿದರು.
1965ರ ಭಾರತ-ಪಾಕಿಸ್ತಾನ ಯುದ್ಧದ 50ನೇ ವರ್ಷಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಗೌರವ ಸಲ್ಲಿಸಿದರು.

ನವದೆಹಲಿ: 1965ರ ಭಾರತ-ಪಾಕಿಸ್ತಾನ ಯುದ್ಧದ 50ನೇ ವರ್ಷಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ  ದೆಹಲಿಯ ಅಮರ ಜ್ಯೋತಿಯಲ್ಲಿ ಯೋಧರಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ದೇಶ ರಕ್ಷಣೆಗಾಗಿ ಹೋರಾಡಿದ ಎಲ್ಲಾ ಸೈನಿಕರಿಗೆ ನನ್ನ ನಮನಗಳು. ನಮ್ಮ ದೇಶದ ಸೈನಿಕರ ಧೈರ್ಯ ಮತ್ತು ಸಾಹಸ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಸೈನಿಕರು ಎಲ್ಲಾ ಅಡೆ-ತಡೆಗಳನ್ನು ನಿವಾರಿಸಿ ಭಾರತ ದೇಶದ ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿದಿದ್ದಾರೆ. ಆ ಸಮಯದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ನಾಯಕತ್ವವನ್ನು ನಾವು ಸ್ಮರಿಸಬೇಕು. ಅವರು ನಮ್ಮ ದೇಶದ ಶಕ್ತಿಯಾಗಿದ್ದರು ಎಂದು ಪ್ರಧಾನಿ ಸ್ಮರಿಸಿದ್ದಾರೆ.

1965ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧ ಕದನಗಳ ಪರಾಕಾಷ್ಠೆಯಾಗಿದ್ದು, ಇದು 1965 ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಮುಂದುವರಿದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com