ಭೂ ಸುಗ್ರೀವಾಜ್ಞೆ ರದ್ದಾಗುತ್ತಿರುವುದು ಸರ್ಕಾರಕ್ಕೆ ಹಿನ್ನಡೆಯಲ್ಲ: ಅರುಣ್ ಜೇಟ್ಲಿ

ಭೂ-ಸುಗ್ರೀವಾಜ್ಞೆ ರದ್ದಾಗಲು ಅವಕಾಶ ನೀಡಲು ನಿರ್ಧರಿಸಿರುವುದು ಸರ್ಕಾರಕ್ಕೆ ಹಿನ್ನಡೆಯುಂತಾದಂತಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ

ನವದೆಹಲಿ: ಭೂ-ಸುಗ್ರೀವಾಜ್ಞೆ ರದ್ದಾಗಲು ಅವಕಾಶ ನೀಡಲು ನಿರ್ಧರಿಸಿರುವುದು ಸರ್ಕಾರಕ್ಕೆ ಹಿನ್ನಡೆಯುಂತಾದಂತಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.  

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಯ್ಕೆ ಮಾಡಿಕೊಂಡಿರುವ ಪರ್ಯಾಯ ಮಾರ್ಗದಿಂದ ರಾಜ್ಯ ಸರ್ಕಾಗಳಿಗೆ ಅನುಕೂಲವಾಗಲಿದೆ ಎಂದು ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಎನ್ ಡಿಎ ಸರ್ಕಾರ ಪ್ರಸ್ತಾವಿತ ಭೂ- ಸುಗ್ರೀವಾಜ್ಞೆಯನ್ನು ಮರು ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದರು.

ಭೂಸ್ವಾಧೀನಕ್ಕೆ ರಾಜ್ಯ ಸರ್ಕಾಗಳಿಗೆ ಅನುಕೂಲವಾಗುವಂತೆಯೇ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತದೆ ಎಂದು ಮೋದಿ ಹೇಳಿದ್ದರು. ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಸಂಸತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಸೆಪ್ಟೆಂಬರ್ ಗೆ ಸುಗ್ರೀವಾಜ್ಞೆ ರದ್ದಾಗಲಿದ್ದು ಕೇಂದ್ರ ಸರ್ಕಾರಕ್ಕೆ ಉಂಟಾದ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿತ್ತು. ಆದರೆ ಇದನ್ನು ಅಲ್ಲಗಳೆದಿರುವ ಅರುಣ್ ಜೇಟ್ಲಿ ಸುಗ್ರೀವಾಜ್ಞೆ ರದ್ದಾಗಲು ಅವಕಾಶ ನೀಡಿರುವುದು ಸರ್ಕಾರಕ್ಕೆ ಹಿನ್ನಡೆಯಲ್ಲ ಮುನ್ನಡೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com