ತೆಲಂಗಾಣದಲ್ಲಿ ಮೂವರಿಗೆ ಹಂದಿಜ್ವರ ಪತ್ತೆ

ತೆಲಂಗಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮೂವರಲ್ಲಿ ಎಚ್1ಎನ್1 ಸೋಂಕು ಪತ್ತೆಯಾಗಿರುವ ವರದಿಯಾಗಿದೆ. ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೈದರಾಬಾದ್: ತೆಲಂಗಾಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮೂವರಲ್ಲಿ ಎಚ್1ಎನ್1 ಸೋಂಕು ಪತ್ತೆಯಾಗಿರುವ ವರದಿಯಾಗಿದೆ.

ಸೋಂಕು ತಗುಲಿರುವ ಮೂವರು ರೋಗಿಗಳು ತೆಲಂಗಾಣದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಬ್ಬ ರೋಗಿಯ ಆರೋಗ್ಯ ಸ್ಥಿರವಾಗಿದ್ದು, ಇನ್ನಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಪುಶ್ಕರಲು ಮೇಳದಿಂದ  ಸೋಂಕು ತಗುಲಿರಬಹುದು ಎಂದು ಹಿರಿಯ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ತೆಲಂಗಾಣ ರಾಜ್ಯದ್ಯಂತ ಹಂದಿ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ನೋಡಲ್ ಅಧಿಕಾರಿ ತಿಳಿಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com