ಉಪರಾಷ್ಟ್ರಪತಿ ಅನ್ಸಾರಿ ಹೇಳಿಕೆಗೆ ವಿಹೆಚ್ ಪಿ ವಿರೋಧ, ಕ್ಷಮೆ ಯಾಚನೆಗೆ ಆಗ್ರಹ

ಮುಸಲ್ಮಾನರು ತಾರತಮ್ಯ ಎದುರಿಸುತ್ತಿದ್ದಾರೆಂದು ಹೇಳಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ

ನವದೆಹಲಿ: ಮುಸಲ್ಮಾನರು ತಾರತಮ್ಯ ಎದುರಿಸುತ್ತಿದ್ದಾರೆಂದು ಹೇಳಿದ್ದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತಪಡಿಸಿದೆ.

ಹಮೀದ್ ಅನ್ಸಾರಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಇಲ್ಲವೇ, ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯವನ್ನು ಆಯ್ಕೆ ಮಾಡಿಕೊಳ್ಳಲಿ, ಉಪರಾಷ್ಟ್ರಪತಿಗಳು ನೀಡಿರುವ  ಬೇಜವಾಬ್ದಾರಿಯುತ ಹೇಳಿಕೆಯನ್ನು ವಿಹೆಚ್ ಪಿ ಖಂಡಿಸುತ್ತದೆ ಎಂದು ವಿಶ್ವಹಿಂದೂ ಪರಿಷತ್ ನ ವಕ್ತಾರ ಸುರೇಂದ್ರ ಜೈನ್ ಹೇಳಿದ್ದಾರೆ.

ಮುಸ್ಲಿಮರು ಭಾರತದ ಅತಿದೊಡ್ಡ ಧಾರ್ಮಿಕ ಅಲ್ಪಸಂಖ್ಯಾತರು, ಮುಸ್ಲಿಂ ರಾಷ್ಟ್ರಗಳಲ್ಲಿರುವ ಅಲ್ಪಸಂಖ್ಯಾತರಿಗಿಂತಲೂ ಭಾರತದ ಅಲ್ಪಸಂಖ್ಯಾತರಿಗೆ ಅತಿ ಹೆಚ್ಚು ಸಾಂವಿಧಾನಿಕ ಹಕ್ಕುಗಳನ್ನು ನೀಡಲಾಗಿದೆ. ಮುಸ್ಲಿಮರಿಗಿರುವಷ್ಟು ಹಕ್ಕುಗಳು ಭಾರತದ ಹಿಂದೂಗಳಿಗೂ ಇಲ್ಲ ಎಂದು ಸುರೇಂದ್ರ ಜೈನ್ ಹೇಳಿದ್ದರೆ.

ನಿನ್ನೆ ಅಖಿಲ ಭಾರತ ಮಜ್ ಲೋಯಿಸ್-ಇ-ಮುಶಾವರತ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಹಮೀದ್ ಅನ್ಸಾರಿ, ಗುರುತಿಸಿಕೊಳ್ಳುವಿಕೆ, ರಕ್ಷಣೆ, ಶಿಕ್ಷಣ, ಉದ್ಧಾರ ಮತ್ತು ನಿರ್ಧಾರ ತೆಗೆದುಕೊಳ್ಳುವ ವಿಷಯದಲ್ಲಿ ಭಾರತೀಯ ಮುಸಲ್ಮಾನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಸರ್ಕಾರಗಳು ಸರಿಪಡಿಸಬೇಕಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com