ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಚೆನ್ನೈ ಹವಾಮಾನ ಇಲಾಖೆ

ಜಲಪ್ರಳಯದಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ...
ಮಳೆಯಿಂದ ಜಲಾವೃತ ಗೊಂಡಿರುವ ಚೆನ್ನೈ
ಮಳೆಯಿಂದ ಜಲಾವೃತ ಗೊಂಡಿರುವ ಚೆನ್ನೈ
Updated on: 

ಚೆನ್ನೈ: ಜಲಪ್ರಳಯದಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಪುದುಚೆರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಅತಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಿದೆ.

ತಮಿಳುನಾಡಿನ ಉತ್ತರ ಜಿಲ್ಲೆಗಳಾದ ಚೆನ್ನೈ, ತಿರುವಲ್ಲೂರ್ ಮತ್ತು ಕಂಚೀಪುರಂ ನಲ್ಲಿ  ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.48 ಗಂಟೆಗಳ  ನಂತರ ಪರಿಸ್ಥಿತಿ ಸುಧಾರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಲ್ ಎಸ್ ರಾಥೋರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com