

ವಿಜಯವಾಡ: ಆಂಧ್ರ ಪ್ರದೇಶ ಕಾಂಗ್ರೆಸ್ ಮುಖಂಡ ಆನಮ್ ರಾಮನಾರಾಯಣ ರೆಡ್ಡಿ ಹಾಗೂ ಅವರ ಸಹೋದರ ಹಾಗೂ ಮಾಜಿ ಶಾಸಕ ವಿವೇಕನಾಂದ ರೆಡ್ಡಿ ಕಾಂಗ್ರೆಸ್ ತೊರೆದು ಟಿಡಿಪಿ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ತೊರೆದು ಟಿಡಿಪಿಗೆ ಆಗಮಿಸಿದ ರೆಡ್ಡಿ ಸಹೋದರರನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು.ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಆನಮ್ ಕುಟುಂಬ ತುಂಬಾ ಹೆಸರುವಾಸಿಯಾಗಿದ್ದೂ, ಈ ಇಬ್ಬರು ಸಹೋದರರು ಕಾಂಗ್ರೆಸ್ ತೊರೆದಿರುವುದು ಪಕ್ಷಕ್ಕೆ ಸಾಕಷ್ಟು ಹಿನ್ನಡೆಯಾಗಿದೆ ಎಂದು ವಿಶ್ಲೇಸಿಸಲಾಗುತ್ತಿದೆ,