ಗುಜರಾತ್‍ನಲ್ಲಿ ಕೈ ಪಾರಮ್ಯ

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದೆ...
ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ (ಸಂಗ್ರಹ ಚಿತ್ರ)
ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ (ಸಂಗ್ರಹ ಚಿತ್ರ)

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ನಗರ ಪ್ರದೇಶದಲ್ಲಿ ಬಿಜೆಪಿ ಪಾರಮ್ಯ ಮುಂದುವರಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಹುಟ್ಟೂರು ಮೆಹಸಾನಾದಲ್ಲಿ  ಮುನಿಸಿಪಲ್ ಕಾರ್ಪೊರೇಷನ್ ಮತ್ತು ಜಿಲ್ಲಾ ಪಂಚಾಯತ್ ಅನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಇತ್ತೀಚೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಬುಧವಾರ ನಡೆದಿದ್ದು, 31 ಜಿಲ್ಲಾ ಪಂಚಾಯ್ತಿಗಳ ಪೈಕಿ ಕಾಂಗ್ರೆಸ್ 18ರಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 30 ಜಿಲ್ಲಾ ಪಂಚಾಯ್ತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com