ಪ್ರವಾಹ ಪೀಡಿತ ಚೆನ್ನೈನತ್ತ ಪ್ರಧಾನಿ ಮೋದಿ ಪ್ರಯಾಣ

ಬಂಗಾಳಕೊಲ್ಲಿಯಲ್ಲಿನ ವಾಯುಬಾರಿ ಕುಸಿತದ ಪರಿಣಾಮ ಕುಂಭದ್ರೋಣ ಮಳೆಗೆ ತತ್ತರಿಸಿರುವ ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಬೆಳಸಿದ್ದಾರೆ...
ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ(ಸಂಗ್ರಹ ಚಿತ್ರ)
ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ(ಸಂಗ್ರಹ ಚಿತ್ರ)
Updated on: 
ನವದೆಹಲಿ: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕುಂಭದ್ರೋಣ ಮಳೆಗೆ ತತ್ತರಿಸಿರುವ ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಬೆಳಸಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಚೆನ್ನೈ ಮಹಾನಗರ ಸಂಪೂರ್ಣ ಜಲಾವೃತಗೊಂಡಿದ್ದು, ಮುಖ್ಯಮಂತ್ರಿ ಜಯಲಲಿತಾ ಅವರು ಹೆಲಿಕಾಪ್ಟರ್ ಮೂಲಕ ಅವಲೋಕನ ನಡೆಸಿದ ಬೆನ್ನಲ್ಲೇ ಇದೀಗ ನರೇಂದ್ರ ಮೋದಿ ಅವರು ಪ್ರವಾಹ ಪೀಡಿತ ಚೆನ್ನೈಗೆ ಪ್ರಯಾಣ ಬೆಳಸಿದ್ದಾರೆ.
ವಿಶೇಷ ವಿಮಾನದಲ್ಲಿ ತೆರಳಿರುವ ನರೇಂದ್ರ ಮೋದಿ ಅವರು ಚೆನ್ನೈನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಚೆನ್ನೈಗೆ ಪ್ರಯಾಣ ಬೆಳಸಿರುವ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com