ಮಾಲಿನ್ಯದ ವಿರುದ್ಧ ನ್ಯಾಯಾಲಯ ಕಿಡಿ: ತುರ್ತು ಸಭೆ ಕರೆದ ಕೇಜ್ರಿವಾಲ್

ರಾಜಧಾನಿ ದೆಹಲಿ ಮಾಲಿನ್ಯ ಕುರಿತಂತೆ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತುರ್ತು ಸಭೆ ಕರೆದಿದ್ದಾರೆಂದು ತಿಳಿದುಬಂದಿದೆ...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ರಾಜಧಾನಿ ದೆಹಲಿ ಮಾಲಿನ್ಯ ಕುರಿತಂತೆ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತುರ್ತು ಸಭೆ ಕರೆದಿದ್ದಾರೆಂದು ತಿಳಿದುಬಂದಿದೆ.

ದೆಹಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರವಷ್ಟೆ ಹೈ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಮಾಲಿನ್ಯ ತಪಾಸಣೆ ಹಾಗೂ ಮಾಲಿನ್ಯ ತಡೆ ಕುರಿತಂತೆ ಸರ್ಕಾರ ಯಾವ ರೀತಿಯ ಕ್ರಮಗಳನ್ನು ತೆಗದುಕೊಂಡಿದೆ. ಯಾವ ರೀತಿಯ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದು ಕೇಳಿತ್ತು. ಹೀಗಾಗಿ ಯೋಜನೆ ಕುರಿತಂತೆ ದೆಹಲಿ ಸರ್ಕಾರ ಹಾಗೂ ಪರಿಸರ ಸಚಿವಾಲಯವು ನ್ಯಾಯಾಲಯಕ್ಕೆ ವಿವರಣೆ ಸಲ್ಲಿಸಿತ್ತು.

ಇದನ್ನು ಪರಿಶೀಲಿಸಿ ನ್ಯಾಯಾಲಯವು ಸರ್ಕಾರ ಹಾಗೂ ಪರಿಸರ ಸಚಿವಾಲಯ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯು ಸಮಗ್ರ ಹಾಗೂ ವಿಸ್ತಾರವಾಗಿಲ್ಲ. ವಿವರಣೆಯಲ್ಲಿ ಜವಾಬ್ದಾರಿ ಹಾಗೂ ಸಂಯಮಯುತ ಕಾರ್ಯ ಕುರಿತ ಮಾಹಿತಿಗಳಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಹೀಗಾಗಿ ನ್ಯಾಯಾಲಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾಲಿನ್ಯ ಕುರಿತಂತೆ ಇಂದು ತುರ್ತು ಸಭೆ ಕರೆದಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com